

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಕಲಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ವತಿಯಿಂದ ಜು. 29ರಂದು ಬೆಳಗ್ಗೆ 11.30ಕ್ಕೆ ಕಾಲೇಜಿನ ವಾಣಿಜ್ಯ ವಿಭಾಗದ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕೋದ್ಯಮ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿದೆ.
ಪತ್ರಕರ್ತ ಡಾ. ವಿಶ್ವನಾಥ ಕೋಟಿ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇತ್ತೀಚಿನ ಬದಲಾವಣೆ ಕುರಿತು ಮಾತನಾಡುವರು. ಅತಿಥಿಯಾಗಿ ಕಾಲೇಜಿನ ಅಕಾಡೆಮಿ ಡೀನ್ ಡಾ.ಮುಕುಂದ ಲಮಾಣಿ ಆಗಮಿಸುವರು. ಪ್ರಾಚಾರ್ಯ ಡಾ.ಡಿ.ಬಿ. ಕರಡೋಣಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.