ಇಂದು ಅಂಗವಿಕಲರ ದಿನಾಚರಣೆ

Today is the Day of Persons with Disabilities.
Today is the Day of Persons with Disabilities.
Published on

ವಿಜಯಪುರ : ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿ ವಿವಿಧ ಸಂ ಸಂಸ್ಥೆಗಳ ಸಹಯೋಗದಲ್ಲಿ ಡಿ. 3 ರಂದು ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ ಎಂಬ ೂಷವಾಕ್ಯದಡಿ ವಿಶ್ವ ವಿಕಲಚೇತನರ ದಿನಾಚರಣೆ &2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮಂದಿರದವರೆಗೆ ಇಂಧನ ಚಾಲಿತ ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ನಡೆಯಲಿದೆ. ನಂತರ ಬೆಳಗ್ಗೆ 10. 30ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ, ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಕಟಣೆಯು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net