

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ‘ಗಜಪಯಣ’ಕ್ಕೆ ಸೆ. 1ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಚಾಲನೆ ದೊರೆಯಲಿದ್ದು, ಅರಣ್ಯ ಇಲಾಖೆ ಎಲ್ಲ ಸಿದ್ಧ್ದತೆ ಮಾಡಿಕೊಂಡಿದೆ.
ಶುಕ್ರವಾರ ಬೆಳಗ್ಗೆ 9.45ಕ್ಕೆ ತುಲಾ ಲಗ್ನದಲ್ಲಿ ಸಂಪ್ರದಾಯದಂತೆ ಅರಮನೆ ಪುರೋಹಿತ ಪ್ರಹ್ಲಾದರಾವ್ ಮತ್ತವರ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ ಗಜಪಡೆಗೆ ಪೂಜೆ ಸಲ್ಲಿಸುವರು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ. ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕವನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಾಡುವರು. ಶಾಸಕ ಜಿ.ಡಿ.ಹರೀಶ್‌ಗೌಡ ಅಧ್ಯಕ್ಷತೆ ವಹಿಸುವರು.