

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ವಿಶ್ವ ವಿದ್ಯಾಲಯ ಎನ್ಎಸ್ಎಸ್ ಕೋಶ, ಕವಿವಿ ಶಿಕ್ಷಣ ಮಹಾವಿದ್ಯಾಲಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜು. 11ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ವಿಶ್ವ ವಿದ್ಯಾಲಯದ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಜಿಪಂ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ ಶಶಿ ಅತಿಥಿಗಳಾಗಿ ಭಾಗವಹಿಸುವರು. ಕವಿವಿಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರಭಾ ಗುಡ್ಡದಾನ್ವೇರಿ ಅಧ್ಯಕ್ಷತೆ ವಹಿಸುವರು.
ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಕೆ.ಎಸ್. ಕೌಜಲಗಿ ವಿಶೇಷ ಉಪನ್ಯಾ ನೀಡುವರು. ಸಮಾರಂಭದಲ್ಲಿ ಕವಿವಿ ಎನ್ಎಸ್ಎಸ್ ಕೋಶ, ವಾರ್ತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ, ಸೇರಿ ಇತರ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಚಿತ್ತರಗಿ ತಿಳಿಸಿದ್ದಾರೆ.