

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ನಿಮಿತ್ತ ಸೆ. 10ರಂದು ಬೆಳಗ್ಗೆ 11 ಗಂಟೆಗೆ ಡಿಮ್ಹಾನ್ಸ್ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್), ಭಾರತೀಯ ಮನೋ ವೈದ್ಯಕಿಯ ಸಂಘ (ಕರ್ನಾಟಕ ಶಾಖೆ), ಹುಬ್ಬಳ್ಳಿಯ ಕರ್ನಾಟಕ ವೈದ್ಯಕಿಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ, ಸೃಷ್ಟಿ ಪದವಿ ಪೂರ್ವ ಕಾಲೇಜು, ಕೆ.ಇ.ಬೋರ್ಡ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಹಯೋಗದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ನಿಮ್ಹಾನ್ಸ್ನ ಮನೋ ವೈದ್ಯಕಿಯ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಸಿ.ಆರ್. ಚಂದ್ರಶೇಖರ ಭಾಗವಹಿಸುವರು.
ಅತಿಥಿಗಳಾಗಿ ಡಾ. ಸೋಮಶೇಖರ ಜಿಜ್ಜಳ, ಡಾ. ಡಿ.ಷಣ್ಮುಖ, ಡಾ. ರಾಘವೇಂದ್ರ ನಾಯಕ, ಡಾ. ವಿ.ಎಂ. ದೇಶಪಾಂಡೆ ಆಗಮಿಸುವರು. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಅರುಣಕುಮಾರ.ಸಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.