ರಾಜ್ಯದಲ್ಲಿಂದು 1,890 ಜನರಿಗೆ ಕರೊನಾ, 34 ಸೋಂಕಿತರ ಸಾವು

corona
Published on

ಬೆಂಗಳೂರು: ರಾಜ್ಯದಲ್ಲಿಂದು 1,890 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,03,137ಕ್ಕೆ ಏರಿಕೆಯಾಗಿದೆ. ಒಟ್ಟು 16 ಜಿಲ್ಲೆಗಳಲ್ಲಿ ಶೂನ್ಯ ಸಾವು ವರದಿಯಾಗಿದೆ.

ಇಂದು 34 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,525ಕ್ಕೆ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ 1,631 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟಾರೆ ಗುಣಮುಖರಾದವರ ಸಂಖ್ಯೆ 28,43,110ಕ್ಕೆ ಏರಿದೆ. ಸದ್ಯ 23,478 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.30ರಷ್ಟಿದ್ದರೆ, ಮರಣ ಪ್ರಮಾಣ ಶೇ. 1.75ರಷ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net