ಇಂದು ಮಂಗಳೂರು ತಾಲೂಕು ಶಾಲಾ, ಪಪೂ ಕಾಲೇಜುಗಳಿಗೆ ರಜೆ

rain final
Published on

ಮಂಗಳೂರು: ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ಮಂಗಳೂರು ತಾಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಪ್ರಾಥಮಿಕ ಪೂರ್ವ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ( 12 ನೇ ತರಗತಿ ತನಕ) ಜುಲೈ 08 ರಂದು ರಜೆ ಘೋಷಿಸಿ ಮಂಗಳೂರು ತಹಶಿಲ್ದಾರರು ಆದೇಶ ಹೊರಡಿಸಿದ್ದಾರೆ.
ಸಂಭಾವ್ಯ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರು ತುಂಬಿದ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net