ಇಂದು ಪುರುಷರ ಖೋ-ಖೋ ಪಂದ್ಯಾವಳಿ

10khokho
Published on

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಮಹಾವಿದ್ಯಾಲಯದ ಕ್ರೀಡಾ ಮೈದಾನದಲ್ಲಿ ಡಿ.9ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಅಂತರ್ ಮಹಾವಿದ್ಯಾಲಯಗಳ ಪುರುಷರ ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ಜರುಗಲಿದೆ ಎಂದು ಪ್ರಾಚಾರ್ಯ ಪ್ರೊ.ಎಸ್.ಎಂ.ಗುಜಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ವಹಿಸುವರು. ಮೂಡಲಗಿ ತಹಸೀಲ್ದಾರ್ ಮಹಾದೇವ ಸನಮುರಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬಿಇಒ ಅಜಿತ ಮನ್ನಿಕೇರಿ, ಆರ್‌ಸಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಗದೀಶ ಗಸ್ತಿ ಭಾಗವಹಿಸುವರು. ಸಂಜೆ 5 ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net