ಹುಕ್ಕೇರಿ ಹಿರೇಮಠದಲ್ಲಿಂದು 68ನೇ ಮಾಸಿಕ ಸುವಿಚಾರ ಕಾರ್ಯಕ್ರಮ

IMG_20230702_102548.jpg
Published on

ಬೆಳಗಾವಿ : ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ಜರುಗುವ 68ನೇ ಮಾಸಿಕ ಸುವಿಚಾರ ಚಿಂತನೆಯ ಅಂಗವಾಗಿ ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಜು.2 ಭಾನುವಾರ ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಲಕ್ಷ್ಮಣ ಸವದಿ, ಆಸೀಫ್ ಸೇಠ್, ಬಿ.ಆರ್. ಪಾಟೀಲ ಚನ್ನರಾಜ ಹಟ್ಟಿಹೊಳಿ ಆಗಮಿಸಲಿದ್ದಾರೆ.

ಶಬರೀಶ್ ಕಣ್ಣನ್ ನೇತೃತ್ವದಲ್ಲಿ ಶಿವಮೊಗ್ಗ ಸುರೇಶ ಹಾಗೂ ಮೈಸೂರಿನ ಸಿ.ಎಸ್.ಲತಾ ಇವರ ತಂಡದಿಂದ ಭಜವಾ ಕಾರ್ಯಕ್ರಮ ನಡೆಯಲಿವೆ. ಗುರುಕಾರುಣ್ಯ ಪ್ರಶಸ್ತಿಯನ್ನು ಅರವಿಂದ ಅವರಿಗೆ ನೀಡಲಾಗುತ್ತಿದೆ ಎಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net