ಇಂದು ದೇಗುಲ ಉದ್ಘಾಟನೆ, ಅಡ್ಡಪಲ್ಲಕ್ಕಿ ಉತ್ಸವ

Published on

ಬೇಲೂರು: ಶ್ರೀಮದ್ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಸಮ್ಮೇಳನ ಜಾಗೃತಿ ಕಾರ್ಯಕ್ರಮವನ್ನು ಫೆ.28 ರಂದು ತಾಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.


ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಕಲ್ಲೇಶ್ವರ ಸ್ವಾಮಿ ದೇವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇಗುಲ ಉದ್ಘಾಟಿಸಲಾಗುವುದು. ಬೆಳಗ್ಗೆ 10.30ಕ್ಕೆ ಗ್ರಾಮದ ಸರ್ಕಾರಿ ಶಾಲಾ ಮೈದಾನದಿಂದ 108 ಕುಂಭ ಕಳಸಗಳೊಂದಿಗೆ ನಂದಿಧ್ವಜ, ಮಂಗಳ ವಾದ್ಯ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡದೊಂದಿಗೆ ಪ್ರಮುಖ ಬೀದಿಗಳಲ್ಲಿ ಉತ್ಸವ ನಡೆಸಲಾಗುವುದು. ನಂತರ ಧರ್ಮ ಜಾಗೃತಿ ಸಮಾವೇಶ ಶ್ರೀಮದ್ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದೊಂದಿಗೆ ನೆರವೇರಲಿದೆ ಎಂದು ಗ್ರಾಮದ ಮುಖಂಡ ಶಿವಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಕಾರ್ಜುವಳ್ಳಿ ಮಠದ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ, ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಶಾಸಕ ಎಚ್.ಕೆ.ಸುರೇಶ್ ಉದ್ಘಾಟಿಸುವರು. ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ತಹಸೀಲ್ದಾರ್ ಎಂ.ಮಮತಾ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮಾಜಿ ಸಚಿವ ಬಿ.ಶಿವರಾಂ, ಮುಖಂಡರಾದ ರಾಜಶೇಖರ್, ಬಿ.ಡಿ.ಚಂದ್ರೇಗೌಡ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.
ಕಾಂತರಾಜು, ಸೋಮಶೇಖರ್, ಹರೀಶ್, ಸುನೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net