ಇಂದು ಲೋಕಾಯುಕ್ತ ಜನಸಂಪರ್ಕ ಸಭೆ

karnataka-lokayukta
Published on

ರಾಮದುರ್ಗ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜ.10ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರ ವರೆಗೆ ಲೋಕಾಯುಕ್ತ ಜನಸಂಪರ್ಕ ಸಭೆ ಜರುಗಲಿದೆ.

ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು, ತಾಲೂಕುಮಟ್ಟದ ಎಲ್ಲ ಅಧಿಕಾರಿಗಳ ಸಮಕ್ಷಮದಲ್ಲಿ ಸಭೆ ಜರುಗಲಿದ್ದು, ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸ ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದರೆ ಸ್ಥಳದಲ್ಲೇ ಅಧಿಕಾರಿಗಳಿಂದ ಸಮಸ್ಯೆ ಪರಿಹರಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಬೇಕು. ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಡುವುದಾಗಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಸಂಪಾದನೆ ಕುರಿತು ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರ ಅಥವಾ ಗುಪ್ತವಾಗಿ ತಿಳಿಸುವ ಮೂಲಕ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ದೂ. 0831-2950756ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net