ಕೊಳ್ಳೇಗಾಲ: ಪಟ್ಟಣದ ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ಎಚ್.ಕೃಷ್ಣಸ್ವಾಮಿ ಮೆಮೋರಿಯಲ್ ಟ್ರಸ್ಟ್ ಹಾಗೂ ರೋಟರಿ ಮಿಡ್ ಟೌನ್ ಸಹಯೋಗದಲ್ಲಿ ನ.29 ಹಾಗೂ 30 ರಂದು ಸಂಜೆ ವೇಳೆ ನಮ್ಮೂರ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ.
ನ.29 ರಂದು ಸಂಜೆ 4.30 ಗಂಟೆಗೆ ನಮ್ಮೂರ ಕನ್ನಡ ಹಬ್ಬ ಕಾರ್ಯಕ್ರಮ ಮುಡಿಗುಂಡ ವಿರಕ್ತಮಠದ ಶ್ರೀ ಶ್ರೀಕಂಠ ಸ್ವಾಮೀಜಿ, ನಳಂದ ಬೌದ್ಧಪೀಠದ ಶ್ರೀ ಬೋಧಿದತ್ತ ಬಂತೇಜಿ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕೆಪಿಸಿಸಿ ಉಪಾಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಎಸ್.ಬಾಲರಾಜು ಹಾಗೂ ಬಿಜೆಪಿ ಮುಖಂಡ ಡಾ.ಪ್ರೀತನ್ ನಾಗಪ್ಪ, ಕಲರ್ಸ್ ಕನ್ನಡದ ಮುಖ್ಯಸ್ಥ ಪ್ರಶಾಂತ್ ನಾಯಕ್ ಭಾಗವಹಿಸಲಿದ್ದಾರೆ. ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ದತ್ತೇಶ್‌ಕುಮಾರ್, ಆರ್ಯ ವ್ಯೆಶ್ಯ ಸಂಘದ ಎ.ಡಿ.ಕುಮಾರವ ಕೃಷ್ಣ, ಎಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ತಹಸೀಲ್ದಾರ್ ಐ.ಇ ಬಸವರಾಜು ಕಲಾವಿದರಿಗೆ ಸನ್ಮಾನ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ನಗರಸಭಾಧ್ಯಕ್ಷೆ ಸಿ.ಎನ್.ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ. ಶಂಕರ್ ಪಾಲ್ಗೊಳ್ಳಲಿದ್ದಾರೆ.
ನ.30 ರಂದು ಸಂಜೆ 5 ಗಂಟೆಗೆ ಆರಕ್ಷರಿಗೆ ನಮನ ಮತ್ತು ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಲೂರು ಬೃಹನ್ಮಠದ ಶ್ರೀ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರಿನ ಉರಿಲಿಂಗಿಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಬೇತಲ್ ಲೂಥರನ್ ಚರ್ಚ್ ಸಭಾ ಪಾಲಕ ಡಿ.ಜೋಶುವಾ ಪ್ರಸನ್ನಕುಮಾರ್, ಮುಸ್ಲಿಂ ಧರ್ಮ ಗುರು ಅಬ್ದುಲ್ ತವಾಬ್ ಹಜರತ್ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಲಿದ್ದಾರೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರೆ, ಸಂಸದ ಸುನಿಲ್ ಬೋಸ್ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಸಿ.ಪುಟ್ಟರಂಗ ಶೆಟ್ಟಿ, ಎಚ್.ಎಸ್.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನಿಸಲಾಗುತ್ತದೆ. ಸಂಜೆ 5.30 ಗಂಟೆಗೆ ಅರ್ಜುನ್ ಜನ್ಯ ಅವರಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.