

ರಾಮದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಾಮದುರ್ಗ ಘಟಕವು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಡಿ.22ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿದೆ.
ವಿಧಾನಸಭೆ ಮುಖ್ಯೆ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸುವರು. ಪುರಸಭೆ ಸಮುದಾಯ ಸಂಘಟನಾ ಅಧಿಕಾರಿ ಗೀತಾ ಬೆಳಗಲಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಧಾರವಾಡದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸಂಗೀತಾ ಕುರೇರ, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅಶೋಕ ಕುಲಗೋಡ ಆಗಮಿಸಲಿದ್ದಾರೆ.
ಮಕ್ಕಳ ನೈತಿಕ ಶಿಕ್ಷಣದಲ್ಲಿ ಹೆತ್ತವರ ಪಾತ್ರ ಕುರಿತು ವಿಚಾರಗೋಷ್ಠಿಯನ್ನು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವೈಶಾಲಿ ಜೋಶಿ ಮತ್ತು ಮುಧೋಳ ಆರ್‌ಎಂಜಿ ಕಾಲೇಜಿನ ಉಪನ್ಯಾಸಕಿ ಉಮಾ ಮಾಚಕನೂರ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.