

ಬೆಳಗಾವಿ: ಇಲ್ಲಿನ ನೆಹರು ನಗರದ ಕನ್ನಡ ಭವನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವ ಕವಿಗೋಷ್ಠಿ ಕಾರ್ಯಕ್ರಮವು ಜು.21ರಂದು ಬೆಳಗ್ಗೆ 10.30ಕ್ಕೆ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯ ಎಲ್.ಎನ್.ಮುಕುಂದರಾಜ್ ನೆರವೇರಿಸಲಿದ್ದಾರೆ. ಅಧ್ಯತೆಯನ್ನು ಕನ್ನಡ ಭವನದ ನಿರ್ದೇಶಕ ಡಾ.ಬಸವರಾಜ ಜಗಜಂಪಿ ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಆಶಯ ನುಡಿಗಳನ್ನಾಡಲಿದ್ದಾರೆ. ಯುವ ಕವಿ ಗೋಷ್ಠಿಯ ಅಧ್ಯತೆಯನ್ನು ಯುವಕವಿ ದೇವರಾಜ ಹುಣಸಿಕಟ್ಟಿ ವಹಿಸಲಿದ್ದು, ಡಾ.ಹೇಮಾ ಪಟ್ಟಣಶೆಟ್ಟಿ ಅವರು ಕಾವ್ಯ ಅನುಸಂಧಾನ ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಕವಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಗಳಾದ ಕರಿಯಪ್ಪ ಎನ್, ಸದಸ್ಯ ಡಾ.ಮಲ್ಲಿಕಾರ್ಜುನ ಮಾನ್ಪಡೆ ಮತ್ತು ಕನ್ನಡ ಭವನದ ಕಾರ್ಯದರ್ಶಿ ಯ.ರು. ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಸಂಟಕರು ಪ್ರಕಟಣೆಗೆ ತಿಳಿಸಿದ್ದಾರೆ.