

ಕೆರೂರ: ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ನಿರ್ಮಾಣಕ್ಕೆ ಒತ್ತು ನೀಡಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಮುಷ್ಟಿಗೇರಿ ಗ್ರಾಮದಲ್ಲಿ ಭಾನುವಾರ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳು ಭವಿಷ್ಯದ ನಾಗರಿಕರು. ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸಬೇಕು ಎಂದರು.
ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ನನ್ನ ಕ್ಷೇತ್ರದಲ್ಲಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು. ವಸತಿ ಶಾಲೆ ಮಕ್ಕಳ ಮೇಲೆ ಶಿಕ್ಷಕರು ತಂದೆ-ತಾಯಿಗಳಿಗಿಂತ ಹೆಚ್ಚಿನ ಪ್ರೀತಿ ತೋರಿಸುತ್ತಾರೆ ಎಂದರು.
ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ ಮಾತನಾಡಿದರು. ಶಿವಾನಂದ ಕೋನೇರಿ, ಮಾಂತೇಶ ಹಟ್ಟಿ, ಬಸವರಾಜ ಬ್ಯಾಹಟ್ಟಿ, ಬೀರಪ್ಪ ಪೇಂಠಿ, ಗ್ರಾಪಂ ಅಧ್ಯಕ್ಷ ಹನುಮಂತ ಸಿದ್ದನ್ನವರ, ಶ್ರೀಕಾಂತಗೌಡ ಗೌಡರ, ಹನಮಂತ ನರಗುಂದ, ಕಲ್ಯಾಣಪ್ಪ ಶಿರಗುಂಪ್ಪಿ, ವಸತಿ ಶಾಲೆಯ ಮುಖ್ಯ ಶಿಕ್ಷಕ ವೈ.ಎಚ್. ಕೌಜಲಗಿ ಮತ್ತಿತರರಿದ್ದರು.