ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ

SSLC
Published on

ಬೆಂಗಳೂರು: 2021ರ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

ಆನಂತರದಲ್ಲಿ ವಿದ್ಯಾರ್ಥಿಗಳಿಗೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಮಂಡಳಿ ರವಾನಿಸಲಿದೆ. ವಿದ್ಯಾರ್ಥಿಗಳು https://sslc.karnataka.gov.in/ ವೆಬ್​ಸೈಟ್​ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ.

ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಎರಡೇ ದಿನಗಳಲ್ಲೇ ಮುಗಿಸಲಾಗಿದೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದೆಂದು ಘೋಷಿಸಲಾಗಿದೆ. ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net