ಕೂಡ್ಲಿಗಿ ಸಮಗ್ರ ಅಭಿವೃದ್ಧಿಗೆ ಕ್ರಮ

9 KUDLAGI 03
ಕೂಡ್ಲಿಗಿಯಲ್ಲಿ ಸುಸಜ್ಜಿತ ರಸ್ತೆ ನಿರ್ಮಿಸಲು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ಎಇಇ ಕೆ.ನಾಗನಗೌಡ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುಂಡುಮುಣುಗು ಕೆ.ತಿಪ್ಪೇಸ್ವಾಮಿ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಹಿರೇಕುಂಬಳ ಗುಂಟೆ ಉಮೇಶ್, ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯದರ್ಶಿ ಸಿ.ವಿರೂಪಾಕ್ಷಪ್ಪ, ಸಹ ಕಾರ್ಯದರ್ಶಿ ಡಿ.ಎಚ್.ದುರುಗೇಶ ಇದ್ದರು.
Published on

ಕೂಡ್ಲಿಗಿ: ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ ಹೇಳಿದರು.

ಪಟ್ಟಣದ ಸಂಡೂರು ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಭೂಮಿ ಪೂಜೆ ನೆರವೇರಿಸಿ ಶುಕ್ರವಾರ ಮಾತನಾಡಿದರು.

ಕ್ಷೇತ್ರದ ಎಲ್ಲ್ಲ ಗ್ರಾಮೀಣ ಹಾಗೂ ಜಿಲ್ಲಾ ರಸ್ತೆಗಳನ್ನು ಉತ್ತಮ ರಸ್ತೆಗಳನ್ನಾಗಿ ಅಭಿವೃದ್ಧಿ ಮಾಡಿದ್ದು, ಸಾರ್ವಜನಿಕರಿಗೆ ಇದರಿಂದ ತುಂಬಾ ಅನುಕೂಲವಾಗಿದೆ. ಪಟ್ಟಣದಲ್ಲಿ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಂಡೂರು ರಸ್ತೆಯನ್ನು ಅತ್ಯಂತ ಗುಣಮಟ್ಟ ಹಾಗೂ ಸುಧಾರಿತ ರೀತಿಯಲ್ಲಿ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ. 50 ಮೀಟರ್ ರಸ್ತೆ ವಿಸ್ತರಣೆ ಮಾಡಿ ಪಾದಚಾರಿ ಮಾರ್ಗವನ್ನು ಪ್ರತ್ಯೇಕವಾಗಿ ಮಾಡಲಾಗುವುದು.

ರಸ್ತೆ ಮಧ್ಯದಲ್ಲಿ ಸುಸಜ್ಜಿತ ವಿದ್ಯುತ್ ಕಂಬಗಳನ್ನು ಅಳವಡಿಸಲು ಕಾರ್ಯ ಯೋಜನೆ ರೂಪಿಸಲಾಗಿದೆ. ಕ್ಷೇತ್ರದಲ್ಲಿನ ವಿದ್ಯಾರ್ಥಿಗಳ ಅನುಕೂಲ ಕಲ್ಪಿಸಲು ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯವನ್ನು ಮೇಲ್ದರ್ಜೆಗೆರಿಸಿ ಪಿಯುಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗುವುದು.

ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಪ್ರಥಮ ದರ್ಜೆ ಕಾಲೇಜಿಗೆ 50 ಲಕ್ಷ ರೂ. ಅನುದಾನದಲ್ಲಿ ಪ್ರಯೋಗಾಲಯ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆದು ನ್ಯಾಯ ಸಮ್ಮತ ರೀತಿಯಲ್ಲಿ ಜನಹಿತ ಕಾರ್ಯಕ್ರಮ ಮಾಡಲಾಗುವುದು ಎಂದರು.

ಸದಸ್ಯರಾದ ತಳಾಸ್ ವೆಂಕಟೇಶ, ಕೆ.ಎಚ್.ಎಂ.ಸಚಿನ್ ಕುಮಾರ್, ಸಣ್ಣ ಕೊತ್ಲಪ್ಪ, ಕೆ.ಈಶಪ್ಪ, ಬಿ.ಕೆ.ಸರಸ್ವತಿ, ಬಾಸೂ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net