ಸ್ವಸ್ಥ ಸಮಾಜಕ್ಕೆ ಶೌಚಗೃಹಗಳು ಅತ್ಯಗತ್ಯ

19-GPT-1
Published on

ಚಾಮರಾಜನಗರ : ಸ್ವಸ್ಥ ಸಮಾಜಕ್ಕೆ ಶೌಚಗೃಹಗಳು ಅತ್ಯಗತ್ಯವಾಗಿದ್ದು, ಕೇಂದ್ರ ಸರ್ಕಾರವು ದೇಶದ ಎಲ್ಲ ಮನೆಗಳಿಗೆ ಶೌಚಗೃಹ ನಿರ್ಮಿಸಲು ಕ್ರಮ ಕೈಗೊಂಡಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.


ವಿಶ್ವ ಶೌಚಗೃಹ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಅಶುಚಿತ್ವ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನೆಮನೆಗಳಲ್ಲಿಯೂ ಶೌಚಗೃಹ ನಿರ್ಮಿಸಲು ಆದ್ಯತೆ ನೀಡಿದ್ದು, ಸಹಾಯ ಧನ ನೀಡುತ್ತಿವೆ. ಆದ್ದರಿಂದ ಎಲ್ಲರೂ ತಮ್ಮ ಮನೆಗಳಲ್ಲಿ ಶೌಚಗೃಹ ನಿರ್ಮಿಸಿಕೊಳ್ಳುವ ಮೂಲಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಕಿರಣ್ ಪಡ್ನೇಕರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಎಲ್ಲ ಮನೆಗಳಿಗೂ ಶೌಚಗೃಹ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತಿದೆ ಎಂದರು.


ಎಂಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಶೌಚಗೃಹ ನಿರ್ಮಾಣಕ್ಕೆ ಆದೇಶ ಪತ್ರ ವಿತರಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಪಿ.ಮಹದೇವಪ್ಪ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನಾಗಭೂಷಣ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೀನಾ, ಸದಸ್ಯರಾದ ಆರ್.ಗಣೇಶ್, ಕವಿತಾ, ಸ್ವಾಮಿ, ಕರಿಯನಾಯ್ಕ, ಮಾಜಿ ಅಧ್ಯಕ್ಷರಾದ ಮಹದೇವಮ್ಮ, ಮಹದೇವನಾಯ್ಕ, ನಾರಾಯಣನಾಯ್ಕ, ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ, ಮುಖಂಡರಾದ ಆನಂದನಾಯ್ಕ, ಚಿನ್ನಸ್ವಾಮಪ್ಪ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net