

ವಿಜಯವಾಣಿ ಸುದ್ದಿಜಾಲ ಕಡಬ
ಕಳೆದ 1 ವರ್ಷದಲ್ಲಿ ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಲಭಿಸಿದೆ. ಸಂಸ್ಥೆಯ ಈ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿಯ 10 ಲಕ್ಷ ರೂ., ತಾಲೂಕು ಪಂಚಾಯಿತಿಯ 7 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ಬಾಲಕಿಯರ ಶೌಚಗೃಹ, ವಿಶ್ರಾಂತಿ ಕೊಠಡಿ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಿ.ದೇವರಾಜು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಎಂಆರ್‌ಪಿಎಲ್‌ನ ಮ್ಯಾನೇಜರ್(ಆಪರೇಷನ್ಸ್) ಪ್ರದೀಪ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಜಿಪಂ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್‌ಮೀರಾ ಸಾಹೇಬ್, ತಾಪಂ ಮಾಜಿ ಸದಸ್ಯರಾದ ಗಣೇಶ್ ಕೈಕುರೆ, ಫಝಲ್ ಕೋಡಿಂಬಾಳ, ಕೆಡಿಪಿ ಸದಸ್ಯ ಅಶ್ರಫ್ ಶೇಡಿಗುಂಡಿ, ಕಡಬ ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಉಪಸ್ಥಿತರಿದ್ದರು. ಎಂಆರ್‌ಪಿಎಲ್ ಮ್ಯಾನೇಜರ್(ಆಪರೇಷನ್ಸ್) ಪ್ರದೀಪ್, ಕಾಲೇಜು ನಿಕಟಪೂರ್ವ ಪ್ರಾಂಶುಪಾಲ(ಪ್ರಭಾರ) ವಾಸದೇವ ಗೌಡ ಕೋಲ್ಪೆ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ನಿಕಟಪೂರ್ವ ಪ್ರಾಂಶುಪಾಲ(ಪ್ರಭಾರ) ವಾಸದೇವ ಗೌಡ ಕೋಲ್ಪೆ ಸ್ವಾಗತಿಸಿದರು. ಉಪನ್ಯಾಸಕ ಸಲೀನ್ ಕೆ.ಪಿ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭಾರತಿ ಜಿ. ವಂದಿಸಿದರು.
ಸಂಸ್ಥೆ ತನ್ನ ಲಾಭದ ಒಂದಂಶ ಆರೋಗ್ಯ, ಶಿಕ್ಷಣ ಸೇರಿದಂತೆ ಸಮಾಜಮುಖಿ ಕಾರ್ಯಗಳಿಗೆ ಸಿಎಸ್‌ಆರ್ ನಿಧಿ ಮೂಲಕ ಬಳಸುತ್ತಿದೆ. ಕಡಬ ಪಪೂ ಕಾಲೇಜಿನಲ್ಲಿ ನಮ್ಮ ಸಿಎಸ್‌ಆರ್ ನಿಧಿಯಲ್ಲಿ ಕೊಡಲಾದ ಅನುದಾನದ ಕಾಮಗಾರಿ ಅತ್ಯುತ್ತಮ ಗುಣಮಟ್ಟದಲ್ಲಿರುವುದು ಸಂತಸ ತಂದಿದೆ. ಪ್ರದೀಪ್ ಎಂಆರ್‌ಪಿಎಲ್‌ನ ಮ್ಯಾನೇಜರ್(ಆಪರೇಷನ್ಸ್)