ಟೋಯಿಂಗ್ ಕಾರ್ಯಾಚರಣೆ ಚುರುಕು

toing
Published on

ಮಂಗಳೂರು: ನಗರದಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವ ವಾಹನಗಳನ್ನು ಸಂಚಾರಿ ಪೊಲೀಸರು ಟೋಯಿಂಗ್ ನಡೆಸಿ ದಂಡ ವಿಧಿಸುತ್ತಿದ್ದು, ಗುರುವಾರದಿಂದ ಪ್ರಕ್ರಿಯೆ ಚುರುಕುಗೊಂಡಿದೆ.

ಮಂಗಳೂರು ನಗರ ಕಮಿಷನರೆಟ್ ವ್ಯಾಪ್ತಿಯಲ್ಲಿ ನೋ ಪಾರ್ಕಿಂಗ್ ಪ್ರದೇಶ ಗುರುತಿಸಿ ಪೊಲೀಸ್ ಆಯುಕ್ತರು ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದ ವಾಹನಗಳನ್ನು ಟೋಯಿಂಗ್ ನಡೆಸಿ, ಸಂಬಂಧಪಟ್ಟ ವ್ಯಾಪ್ತಿಯ ಸಂಚಾರಿ ಪೊಲೀಸ್ ಠಾಣೆಗೆ ಕೊಂಡೊಯ್ದು ದಂಡ ವಿಧಿಸಿ, ವಾಹನ ಬಿಡುಗಡೆ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ಸಂಚಾರಕ್ಕೆ ಅಡ್ಡಿಯಾಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net