ಟೋಲ್‌ಗಳಲ್ಲೂ ತಪಾಸಣೆ

Toll Plaza
Published on

ಬೆಳಗಾವಿ: ನೆರೆ ರಾಜ್ಯಗಳಲ್ಲಿ ವ್ಯಾಪಕವಾಗಿ ಸೋಂಕು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯ ಸಂಪರ್ಕಿಸುವ ಗಡಿಭಾಗದ ಪ್ರಮುಖ ರಸ್ತೆಗಳಲ್ಲಿ ಹಾಗೂ ಟೋಲ್‌ಗಳಲ್ಲಿಯೂ ಪ್ರಯಾಣಿಕರಿಗೆ ಕೋವಿಡ್-19 ತಪಾಸಣೆ ಮಾಡಿಸಲಾಗುತ್ತಿದೆ. ಇದಕ್ಕಾಗಿ ವೈದ್ಯರ ತಂಡ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಮಾಹಿತಿ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಿರುವ ಸ್ಕ್ರೀನಿಂಗ್ ಸೆಂಟರ್ ಪರಿಶೀಲನೆ ನಡೆಸಿ, ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಆರೋಗ್ಯ ತಪಾಸಣೆಯನ್ನೂ ವಿಮಾನ ನಿಲ್ದಾಣದಲ್ಲಿಯೇ ನಡೆಸಲಾಗುತ್ತಿದೆ ಎಂದರು.

ಸುರಕ್ಷಿತ ಸಂಚಾರಕ್ಕಾಗಿ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಜಾಗೃತಿ ಮೂಡಿಸಲಾಗಿದೆ ಎಂದ ಅವರು, ಇತ್ತೀಚೆಗೆ ವಿದೇಶಿ ಪ್ರಯಾಣ ಮಾಡಿದ್ದ 95 ಜನರಿಗೂ ಈಗಾಗಲೇ ಅವರ ಆರೋಗ್ಯ ತಪಾಸಣೆ ಮಾಡಲಾಗಿದೆ. ಯಾರಲ್ಲಿಯೂ ಕರೊನಾ ಸೋಂಕು ದೃಢಪಟ್ಟಿಲ್ಲ. ಆದರೂ, ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರಿಗೆ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net