ವಿಜಯವಾಣಿ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ನಾಳೆ

's Day - Vijayavani
Published on

ಹಾಸನ: ವಿಶ್ವ ಮಹಿಳಾ ದಿನದ ಅಂಗವಾಗಿ ಕನ್ನಡದ ನಂಬರ್ ಒನ್ ದಿನಪತ್ರಿಕೆ ವಿಜಯವಾಣಿ ನಗರದ ಎವಿಕೆ ಮಹಿಳಾ ಪದವಿ ಕಾಲೇಜಿನ ಸಹಭಾಗಿತ್ವದಲ್ಲಿ ಶನಿವಾರ ಮಹಿಳಾ ದಿನ ಆಚರಣೆ ಹಮ್ಮಿಕೊಂಡಿದೆ. ಕಾರ್ಯಕ್ರಮದ ಪ್ರಯುಕ್ತ ಕಾಲೇಜು ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಎವಿಕೆ ಕಾಲೇಜು ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದೆ. ಆ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕದ ಸಂಯೋಜಕರಾದ ಡಾ.ಎನ್.ಎಸ್. ಶಶಿಕಲಾ ಅವರು ಮಹಿಳಾ ದಿನಾಚರಣೆ ಕುರಿತು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ‘ಹದಿಹರೆಯ ವಯಸ್ಸಿನಲ್ಲಿ ಏಡ್ಸ್ ಕಾಯಿಲೆ ಬಗ್ಗೆ ಜಾಗೃತಿ’ ವಿಷಯವಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಮೇಲ್ವಿಚಾರಕರಾದ ಡಾ.ಬಿ.ಎಂ. ರವಿಕುಮಾರ್ ಅವರು ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಸೀ.ಚ.ಯತೀಶ್ವರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net