

ಭದ್ರಾವತಿ: ತಾಲೂಕು ರಾಷ್ಟಿçಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಶ್ರೀ ನಾರಾಯಣಗುರು ವಿಚಾರ ವೇದಿಕೆ ಸಹಯೋಗದೊಂದಿಗೆ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆ.31ರಂದು ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ತಾಲೂಕು ಅಧ್ಯಕ್ಷ ಎನ್.ನಟರಾಜ್ ಹೇಳಿದರು. ಬೆಳಗ್ಗೆ 10.30ಕ್ಕೆ ಲೋಯರ್ ಹುತ್ತಾದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. 12ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಾಯಕ ಪ್ರಾಧ್ಯಾಪಕ ಅಣ್ಣಪ್ಪ ಮಳಿಮಠ್ ಉಪನ್ಯಾಸ ನೀಡಲಿದ್ದು ಈಡಿಗ ಸಮಾಜದ 26 ಒಳಪಂಗಡಗಳು ಸೇರಿ ಕೇರಳ ಸಮಾಜ, ಬಿಲ್ಲವ ಸಮಾಜ ಸೇರಿ ಎಲ್ಲ ಸಮುದಾಯದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಮಾತನಾಡಿ, ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಸರ್ಕಾರ ೫೦೦ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಪ್ರಮುಖರಾದ ಓಂಕಾರಪ್ಪ, ಮಹೇಶ್, ಕೆ.ಪಿ.ನಿಂಗೇಶ್, ಟಿ.ಆರ್.ಬಸವರಾಜ್, ಗಂಗಾಧರ್, ವೇಣುಗೋಪಾಲ್ ಇತರರಿದ್ದರು