ನಾಳೆ ಮದ್ದೂರಮ್ಮ ಕೊಂಡೋತ್ಸವ

29M.D.R.9
Published on

ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಹಾಗೂ ಶಕ್ತಿ ದೇವತೆ ಶ್ರೀ ಮದ್ದೂರಮ್ಮನ ಕೊಂಡೋತ್ಸವ ಮೇ.1 ರಂದು ನಡೆಯಲಿದೆ.


ಕೊಂಡೋತ್ಸವ ಅಂಗವಾಗಿ ಏ.28 ರಿಂದ ಮೇ.4 ವರೆಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ. ಮೇ 30 ಬೆಳಗ್ಗೆ 10.30 ಕ್ಕೆ ಮದ್ದೂರಮ್ಮ ಮಠಮನೆ ದೇವಸ್ಥಾನದಲ್ಲಿ ಹೋಮ-ಹವನ ಕಾರ್ಯ ನಡೆಯಲಿದ್ದು, ಮಧ್ಯಾಹ್ನ 2.30 ಕ್ಕೆ ಎಲ್ಲಮ್ಮ ದೇವಿಗೆ ಚಂದ್ರ ಭಂಡಾರ ಸೇವೆ ಸಲ್ಲಿಸಲಾಗುತ್ತದೆ. ಸಂಜೆ 4 ಗಂಟೆಗೆ ಕೊಂಡ ಬಂಡಿ ಉತ್ಸವ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಂಜೆ 6. 30ಕ್ಕೆ ಮದ್ದೂರಮ್ಮನವರ ಮೂಲ ದೇವಸ್ಥಾನದಲ್ಲಿ ಅಭಿಷೇಕ ಮತ್ತು ಹೋಮ ಹವನ ಹಾಗೂ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 11.30 ಕ್ಕೆ ಕೊಂಡಕ್ಕೆ ಅಗ್ನಿ ಸ್ಪರ್ಶ ಪೂಜೆ ನೆರವೇರಲಿದೆ.


ಮೇ 1ರಂದು ಬೆಳಗ್ಗೆ 6 ಕ್ಕೆ ಮದ್ದೂರಮ್ಮ ಕೊಂಡ ಪ್ರವೇಶ ನಡೆಯಲಿದೆ. ಸಂಜೆ 4.30 ಕ್ಕೆ ಹಾಲರವಿ ಸೇವೆ ನಡೆಯಲಿದೆ. 2 ರಂದು ಸಂಜೆ 4 ಗಂಟೆಗೆ ಬಾಯಿ ಬೀಗ ಸೇವೆ ಸಮೇತ ಸಿಡಿ ಉತ್ಸವ ನೆರವೇರಲಿದೆ. 3 ರಂದು ಸಂಜೆ 4 ಗಂಟೆಗೆ ಮದ್ದೂರಮ್ಮನವರಿಗೆ ಓಕಳಿ ಸೇವೆ, ಸಂಜೆ 6.30 ಗಂಟೆಗೆ ಉಯ್ಯಲೆ ಉತ್ಸವ, ರಾತ್ರಿ 9 ಗಂಟೆಗೆ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.


4 ರಂದು ಸಂಜೆ 4 ಗಂಟೆಗೆ ಮದ್ದೂರಮ್ಮನವರಿಗೆ ಎಣ್ಣೆ ಮಜ್ಜನ ಸೇವೆ, ಪುಷ್ಪಾಲಂಕಾರ. ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 9 ಗಂಟೆಗೆ ಮೂಲ ದೇವಸ್ಥಾನದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಾದ ಬಳಿಕ ಮಠಮನೆ ತಲುಪಲಿದ್ದು, ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ದೇಗುಲದ ಪ್ರಧಾನ ಅರ್ಚಕ ಪೂಜಾರಿ ಎಂ.ವೈ.ಶಿವಣ್ಣ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net