ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ "ನಮ್ಮ ಜವನೆರ್ ಸೇವಾ ಟ್ರಸ್ಟ್' ವಾರ್ಷಿಕೋತ್ಸವ ಪ್ರಯುಕ್ತ ಜ.19ರಂದು ರಾಯಿ ಬಲಪು ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9ರಿಂದ ಬೃಹತ್ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ) ಅಂಚೆ ಜನಸಂಪರ್ಕ ಅಭಿಯಾನ ಜರುಗಲಿದೆ.
ರಾತ್ರಿ 7.30ಕ್ಕೆ ಅಶಕ್ತ ಕುಟುಂಬಗಳಿಗೆ ಆರೋಗ್ಯ ನಿಧಿ ವಿತರಣೆ, ಪ್ರೋತ್ಸಾಹ ಧನ ವಿತರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸತ ಲೋಕೇಶ ಕೈತ್ರೋಡಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ತುಳು ನಿರೂಪಕ ದಿನೇಶ್ ಸುವರ್ಣ ರಾಯಿ ಅವರಿಗೆ ಸನ್ಮಾನ ನಡೆಯಲಿದೆ. ರಾತ್ರಿ 8.30ಕ್ಕೆ ವಿಜಯಕುಮಾರ್ ಕೊಡಿಯಾಲ್ಬೈಲ್ ರಚಿಸಿ ನಿರ್ದೇಶಿಸಿರುವ "ಮೈತಿದಿ' ತುಳು ಸಾಂಸಾರಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.