ತಿ.ನರಸೀಪುರ: ಪಟ್ಟಣದ ವಿದ್ಯೋದಯ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಅ.10ರಂದು ಬೆಳಗ್ಗೆ 10 ಗಂಟೆಗೆ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಯಂತಿ ಆಚರಣೆ ಸಮಿತಿ ವತಿಯಿಂದ ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಸ್ವಾಮೀಜಿ ಅವರ 109ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ಹಾಗೂ ಗ್ರಾಮ ವಿದ್ಯೋದಯ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಪಿ. ಮಹದೇವಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ಜಯಂತಿಯನ್ನು ವಾಟಾಳು ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸುವರು. ಸರ್ಕಾರಿ ಶಾಲೆಯ ಶಿಕ್ಷಕಿ ಜ್ಯೋತಿ ಪರಮೇಶ್ ರಾಜೇಂದ್ರ ಶ್ರೀಗಳಿಗೆ ನಮನ ಸಲ್ಲಿಸುವರು. ಮುಖ್ಯ ಅತಿಥಿಗಳಾಗಿ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜು, ಹಿರಿಯ ವಕೀಲ ಸಿ.ಎಂ.ಜಗದೀಶ್ ಹಾಗೂ ಇನ್ನಿತರ ಗಣ್ಯರು ಭಾಗವಹಿಸುವರು ಎಂದು ಆಚರಣಾ ಸಮಿತಿಯ ಸಂಚಾಲಕ ಬಿ.ಎಂ.ಶಿವಮಲ್ಲಪ್ಪ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.