

ಹುನಗುಂದ: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಜಿಪಂ ಶಾಲಾ ಶಿಕ್ಷಕರ ಇಲಾಖೆ, ತಾಲೂಕು ಆಡಳಿತ, ತಾಪಂ ಮತ್ತು ಅವಳಿ ತಾಲೂಕಿನ ಬಿಇಒ ಕಚೇರಿ ಆಶ್ರಯದಲ್ಲಿ ಸೆ.16 ರಂದು ಬೆಳಗ್ಗೆ ಅಮರಾವತಿ ರಸ್ತೆಯ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಲಿದೆ.
ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಶಾಸಕ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮ ಉದ್ಘಾಟಿಸುವರು.
ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕ ಎಚ್. ಐ. ಮೇಟಿ, ಸಂಸದ ಪಿ.ಸಿ. ಗದ್ದಿಗೌಡರ, ವಿಪ ಸದಸ್ಯರಾದ ಪಿ.ಎಚ್. ಪೂಜಾರ, ಹನುಮಂತ ನಿರಾಣಿ, ಸುನೀಲಗೌಡ ಪಾಟೀಲ, ಪುರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಡಿವೈಎಸ್‌ಪಿ ಪ್ರಭುಗೌಡ ಕಿರದಳ್ಳಿ, ಉಪನಿರ್ದೇಶಕ ಬಿ.ಕೆ. ನಂದನೂರ, ತಹಸೀಲ್ದಾರ್ ನಿಂಗಪ್ಪ ಬಿರಾದಾರ, ತಾಪಂ ಇಒ ಮುರಳಿ ದೇಶಪಾಂಡೆ, ಶರಣಪ್ಪ ಕಾರಿಕಲ, ಬಿಇಒ ಜಾಸ್ಮೀನ್ ಕಿಲ್ಲೇದಾರ, ಸಿದ್ದನಗೌಡ ಪಾಟೀಲ ಉಪಸ್ಥಿತರಿರುವರು. ಪಪೂ ಕಾಲೇಜಿನ ಅಂದಾನೆಪ್ಪ ಪಲ್ಲೇದ ಉಪನ್ಯಾಸ ನೀಡಲಿದ್ದಾರೆ. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಬಿ.ಎಚ್. ತಿಳಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.