ಉಳ್ಳಾಲ: ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಜ.3ರಂದು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆಯಲಿದೆ. ಸಮ್ಮೇಳನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತಿಮತ್ ರಫೀದ ಅವರನ್ನು ಆರಿಸಲಾಗಿದೆ ಎಂದು ಉಳ್ಳಾಲ ಕ.ಸಾ.ಪ. ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಹರೇಕಳ ಗ್ರಾಮ ಪಂಚಾಯಿತಿ ಆವರಣದಿಂದ ಜಾನಪದ ದಿಬ್ಬಣ ಹೊರಡಲಿದ್ದು, ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಉದ್ಘಾಟಿಸಲಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಭಾಗವಹಿಸಲಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಸೌಜನ್ಯಾ ಹೆಗ್ಡೆ, ಎಚ್.ಆರ್.ಈಶ್ವರ್, ಸಮ್ಮೇಳನ ಸಂಚಾಲಕ ತ್ಯಾಗಮ್ ಹರೇಕಳ ಇನ್ನಿತರರು ಭಾಗವಹಿಸಲಿದ್ದಾರೆ. ಕಲೆ, ಸಾಹಿತ್ಯ, ಕ್ರೀಡೆ, ಯಕ್ಷಗಾನ, ಸಾಂಸ್ಕೃತಿಕ ಮುಂತಾದ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.
ಸಮ್ಮೇಳನದಲ್ಲಿ ವಿದ್ಯಾರ್ಥಿ ಕಾವ್ಯ ವಾಚನ, ಗೀತಾ ಗಾಯನ ಗೋಷ್ಠಿ, ನಮ್ಮ ಅಬ್ಬಕ್ಕ ನಾನು ಕಂಡಂತೆ ಸಂವಾದಗೋಷ್ಠಿ, ಶಿಕ್ಷಣ ಮತ್ತು ವಾಧ್ಯಮ ಕುರಿತ ಚಿಂತನಗೋಷ್ಠಿ ನಡೆಯಲಿದೆ. ಸಂಜೆ 3 ಗಂಟೆಗೆ ನಡೆಯಲಿರುವ ಸವಾರೋಪದಲ್ಲಿ ಧನಂಜಯ ಕುಂಬ್ಳೆ ಸವಾರೋಪ ಭಾಷಣ ವಾಡಲಿದ್ದಾರೆ. ಉಳ್ಳಾಲ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕವಿಗಳಾಗಿ, ಪ್ರಬಂಧ ಮಂಡಿಸಲಿದ್ದಾರೆಂದು ಹೇಳಿದರು.
ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ರೈ ಕಲ್ಲಿವಾರ್, ಚಂದ್ರಹಾಸ್ ಶೆಟ್ಟಿ ಗೋಷ್ಠಿಯಲ್ಲಿದ್ದರು.