ನಾಳೆ ಯೋಗ ದಿನಾಚರಣೆ

19 HND MANVI
ಹುನಗುಂದದ ವಿಮವಿವ ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ. ಮಹಾಂತೇಶ ಕಡಪಟ್ಟಿ ಮಾತನಾಡಿದರು. ಸಂಘದ ನಿರ್ದೇಶಕರಾದ ಎಂ.ಎಸ್. ಮಠ, ಅರುಣೋದಯ ದುದ್ಗಿ, ರವಿ ಹುಚನೂರ ಇದ್ದರು.
Published on

ಹುನಗುಂದ: ಪಟ್ಟಣದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ ಹಾಗೂ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಜೂ.21 ರಂದು ಬೆಳಗ್ಗೆ 7 ಗಂಟೆಗೆ ವಿ.ಮ. ಪ್ರೌಢಶಾಲೆ ಮೈದಾನದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುವುದೆಂದು ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಹೇಳಿದರು.

ಪಟ್ಟಣದ ವಿಮವಿವ ಸಂಘದ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಏಳಿಗೆಗಾಗಿ ವಿಶ್ವ ಯೋಗ ದಿನಾಚರಣೆ ಆಚರಿಸುತ್ತಿದ್ದು, ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಟ್ಟಣದ ಎಲ್ಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಸಂಘದ ನಿರ್ದೇಶಕರಾದ ಎಂ.ಎಸ್. ಮಠ, ಅರುಣೋದಯ ದುದ್ಗಿ, ರವಿ ಹುಚನೂರ, ಡಾ.ಎಸ್.ಎಚ್. ಮುದಗಲ್ಲ, ಎಂ.ಐ. ಕತ್ತಿ, ಬಸವರಾಜ ಕೆಂದೂರ, ಆಡಳಿತಾಧಿಕಾರಿ ಆರ್.ಎಸ್. ಬ್ಯಾಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net