ನಾಳೆ ಜೆ.ಪಿ. ನಡ್ಡಾ ಚಿಕ್ಕೋಡಿಗೆ

web3
ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ, ಸಂಜಯ ಕವಟಗಿಮಠ ಇದ್ದರು.
Published on

ಚಿಕ್ಕೋಡಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾ.5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣಕ್ಕೆ ಆಗಮಿಸುತ್ತಲಿದ್ದಾರೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿನ ಕಿವಡ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವಾಪ್ತಿಯ ಬೂತ್‌ಮಟ್ಟದ ಅಧ್ಯಕ್ಷರು, ಬಿಎಲ್2 ಪದಾಧಿಕಾರಿಗಳು ಸೇರಿ 4 ಸಾವಿರ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕ್ಷೇತ್ರದ ವ್ಯಾಪ್ತಿಯ ಶಾಸಕರು, ಮಾಜಿ ಶಾಸಕರು ಸೇರಿ ಇತರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ದುಂಡಪ್ಪ ಬೆಂಡವಾಡೆ, ಸಂಜಯ ಕವಟಗಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net