ನಾಳೆ ಸಿರಗುಪ್ಪಕ್ಕೆ ಜ್ಯೋತಿ ರಥಯಾತ್ರೆ ಪ್ರವೇಶ

Sirguppa Meeting
ಸಿರಗುಪ್ಪ ತಾಲೂಕು ಕಚೇರಿಯಲ್ಲಿ ಕನ್ನಡ ಜ್ಯೋತಿ ರಥ ಆಗಮಿಸುವ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಎಚ್.ವಿಶ್ವನಾಥ ಮಾತನಾಡಿದರು. ತಾ.ಪಂ.ಇ.ಒ. ಪವನ್‌ಕುಮಾರ್ ಇದ್ದರು.
Published on

ಸಿರಗುಪ್ಪ: ನಗರಕ್ಕೆ ಕನ್ನಡ ಜ್ಯೋತಿ ರಥಯಾತ್ರೆ ನ.22ರಂದು ಆಗಮಿಸಲಿದ್ದು, ಅದ್ದೂರಿ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಎಚ್.ವಿಶ್ವನಾಥ ಹೇಳಿದರು.

ನಗರದ ತಾಲೂಕು ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿವಿಧ ಇಲಾಖೆಗಳು, ಕನ್ನಡ ಪರ ಸಂಘಟನೆಗಳು ಪ್ರಚಾರ ಕೈಗೊಳ್ಳಬೇಕು ಎಂದ ಅವರು, ನ.22ರಂದು ರಥಯಾತ್ರೆ ಕಂಪ್ಲಿಯಿಂದ ಮಣ್ಣೂರು ಸೂಗೂರು, ಸಿರಿಗೇರಿ ಗ್ರಾಮದ ಮೂಲಕ ತೆಕ್ಕಲಕೋಟೆ ಮಾರ್ಗವಾಗಿ ನಗರಕ್ಕೆ ಆಗಮಿಸಲಿದೆ.

ನ.23ರಂದು ಅದ್ದೂರಿಯಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಸಂಜೆ 6 ಗಂಟೆಗೆ ನಗರದ ಅಭಯಾಂಜನೇಯಸ್ವಾಮಿ ದೇವಸ್ಥಾನದ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ನ.24ರಂದು ಗಂಗಾವತಿಗೆ ತೆರಳುವ ಕನ್ನಡ ಜ್ಯೋತಿ ರಥಕ್ಕೆ ಬೀಳ್ಕೊಡಲಾಗುವುದು ಎಂದು ತಿಳಿಸಿದರು.

ತಾಪಂ ಇಒ ಪವನ್‌ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಹೊನ್ನೂರಪ್ಪ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net