ವಿಜಯಪುರದಲ್ಲಿ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆ: ದಾವಣಗೆರೆಯಲ್ಲೂ ಶಾಲೆಗಳಿಗೆ ನಾಳೆ ರಜೆ ಘೋಷಣೆ

Vijayapura Rain
Published on

ವಿಜಯಪುರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಗುರುವಾರವೂ ಮುಂದುವರಿದಿದ್ದು, ಇಡೀ ಗ್ರಾಮವೇ ಜಲಾವೃತಗೊಂಡಿದೆ. ಭಾರೀ ಮಳೆಗೆ ಸೇತುವೆ ಮುಳುಗಿದ್ದು, ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.

ಮನೆಯಲ್ಲಿದ್ದ ದವಸ, ಧಾನ್ಯಗಳು ನೀರಿನಲ್ಲಿ ತೇಲಿಹೋಗಿದ್ದು, ಆಶ್ರಯ ಇಲ್ಲದೇ ಜನರು ಪರದಾಡುವಂತಾಗಿದೆ. ನೀರು ಬೇರೆಡೆ ಹರಿಯಲು ವ್ಯವಸ್ಥೆ ಕಲ್ಪಿಸಬೇಕು ಹಾಗೂ ಬಡ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಇಲ್ಲಿನ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಶಾಲೆಗಳಿಗೆ ರಜೆ ಘೋಷಣೆ: ಇನ್ನು ದಾವಣಗೆರೆ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 1ರಿಂದ 10 ನೇ ತರಗತಿ ಶಾಲೆಗಳಿಗೆ ರಜೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಾಲೆಗೆ ಹೋಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೇ.20 ರಂದು ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net