

ಸಿದ್ದಾಪುರ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 9 ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತಾಲೂಕಿನ ನಾಣಿಕಟ್ಟಾ ಬಳಿ ಬುಧವಾರ ವಶಕ್ಕೆ ಪಡೆದಿದ್ದಾರೆ.
ಹೊನ್ನಾವರದಿಂದ ಸಿದ್ದಾಪುರಕ್ಕೆ ತೆರಳುತ್ತಿದ್ದ ವೇಳೆ ಲಾರಿಗಳನ್ನು ತಡೆದು ವಶಕ್ಕೆ ಪಡೆಯಲಾಗಿದೆ.
ಲಾರಿಗಳ ಮಾಲೀಕರಿಗೆ ದಂಡ ವಿಧಿಸಿ ಅವುಗಳನ್ನು ಬಿಡುಗಡೆ ಮಾಡಲಾಗುವುದು ಮರಳನ್ನು ವಶಕ್ಕೆ ಪಡೆದು ಸರ್ಕಾರಿ ಕಾಮಗಾರಿಗಳಿಗೆ ಬಳಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾ ಇಲಾಖೆ ಹಿರಿಯ ಭೂ ವಿಜ್ಞಾನಿ ಆಶಾ ವಿಜಯವಾಣಿಗೆ ತಿಳಿಸಿದ್ದಾರೆ.