

ತೊಗರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಯತ್ನ, ರೈತ ಮುಖಂಡರ ಬಂಧ
ಕಲಬುರಗಿ: ಹಾನಿಗೀಡಾದ ಎಕರೆ ತೊಗರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದರು.
ನಗರದಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅನ್ನಪೂರ್ಣ ಕ್ರಾಸ್ ಬಳಿ ಪ್ರತಿಭಟನೆಗೆ ಮುಂದಾದ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಎಂಬಿ ಸಜ್ಜನ್ ಸೇರಿದಂತೆ ರೈತರನ್ನು ವಶಕ್ಕೆ ಪಡೆದರು.
ತೊಗರಿಗೆ ಬೆಂಬಲ ಬೆಲೆ ನೀಡಬೇಕು, ಆವರ್ಥ ನಿಧಿ ಘೋಷಿಸಬೇಕು, ತೊಗರಿ ಬೋರ್ಡ್ ಅಭಿವೃದ್ಧಿಗೆ ಅನುದಾನ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿದರು. ಪರಿಹಾರ ನೀಡದ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.