ಬಾದಾಮಿಯಲ್ಲಿ ಪೌರಕಾರ್ಮಿಕರಿಂದ ಪಂಜಿನ ಮೆರವಣಿಗೆ

Torch procession by civic workers in Badami
ಬಾದಾಮಿಯಲ್ಲಿ ಪೌರ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಸಂಜೆ ಪೌರ ಕಾರ್ಮಿಕ ಸಂಘಟನೆ ತಾಲೂಕು ಅಧ್ಯಕ್ಷ ಸತೀಶ ಹಿರೇಮನಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
Published on

ಬಾದಾಮಿ: ಪಟ್ಟಣದಲ್ಲಿ ಪೌರ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಸಂಜೆ ಪೌರ ಕಾರ್ಮಿಕ ಸಂಘಟನೆ ತಾಲೂಕು ಅಧ್ಯಕ್ಷ ಸತೀಶ ಹಿರೇಮನಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ಪಂಜಿನ ಮೆರವಣಿಗೆಯು ಪಟ್ಟಣದ ಪುರಸಭೆಯಿಂದ ಪ್ರಾರಂಭಗೊಂಡು ಟಂಗಕೂಟ, ರಾಮದುರ್ಗ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ಸರ್ಕಲ್‌ಗೆ ಬಂದು ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಶಾಂತ ರೀತಿಯಿಂದ ಮುಕ್ತಾಯವಾಯಿತು. ಪಂಜಿನ ಮೆರವಣಿಗೆಯಲ್ಲಿ ಸುಮಾರು 50ಕ್ಕೂ ಅಧಿಕ ಜನರು ಭಾಗವಹಿಸಿದ್ದರು.

ಪೌರಸೇವಾ ನೌಕರರ ಬೇಡಿಕೆಗಳು: ಕರ್ನಾಟಕ ನಾಗರಿಕ ಸೇವಾ ನಿಯಮ ಅಧಿನಿಯಮ 1976 ರನ್ನು ಕರ್ನಾಟಕ ಪೌರ ಸೇವಾ ನೌಕರರಿಗೆ ಅನ್ವಯಿಸುವುದು ಹಾಗೂ ಪಂಚಾಯತ್‌ರಾಜ್ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲಿಯೇ ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರಂದು ಪರಿಗಣಿಸಿ ಜಿಪಿಎ್, ಕೆಜಿಐಡಿ, ಜ್ಯೋತಿ ಸಂಜೀವಿನಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ ಶಾಸನ ಸಭೆಯಲ್ಲಿ ಕಾಯ್ದೆ ಮತ್ತು ನಿಯಮಗಳಗೆ ತಿದ್ದುಪಡಿ ಮಾಡಬೇಕು.

ಹೊರಗುತ್ತಿಗೆ ಅಧಾರದ ಮೇಲೆ ನೀರು ಸರಬರಾಜು ಸಹಾಯಕರು, ವಾಹನ ಚಾಲಕರು, ಬೀದಿ ದೀಪ ಸಹಾಯಕರು, ಲೋಡರ್ನ, ಪಾರ್ಕ ಗಾರ್ಡನರ್, ಕಾವಲುಗಾರ, ಸ್ಯಾನಿಟರಿ ಸೂಟ ವೈಟರ್ ಸೇರಿದಂತೆ ವಿವಿಧ ವೃಂದಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರಪಾವತಿಗೆ ಒಳಪಡಿಸಬೇಕು.

ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಟೇಲ್ ನೌಕರರನ್ನು ಖಾಲಿ ಇರುವ ಹುದ್ದೆಗಳಿಗೆ ಸಕ್ರಮಾತಿ / ವಿಲೀನ ಮಾಡಬೇಕು.

7ನೇ ವೇತನ ಹಾಗೂ 2023-24ನೇ ಸಾಲನಲ್ಲಿ ನೇಮಕಾತಿಗೊಂಡ ಪೌರಕಾರ್ಮಿಕರು, ಲೋಡ್‌ರ್ಸ, ಕ್ಲೀನರ್ಸ ವೇತನವನ್ನು ಎಸ್‌ಎ್ಸಿ ವೇತನ ಅನುದಾನದಡಿಯಲ್ಲಿ ವೇತನ ನೀಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net