ಜಿಲ್ಲೆಯಲ್ಲಿ ಧಾರಾಕಾರ ಮಳೆ

18MAHESH3
Published on

ಚಾಮರಾಜನಗರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಂಫಾನ್ ಚಂಡಮಾರುತ ಉಂಟಾಗಿರುವ ಪರಿಣಾಮ ಜಿಲ್ಲೆಯಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ.

ಜಿಲ್ಲೆಗೆ ವರುಣನ ದರ್ಶನವಾಗಿದ್ದು, ಚಾಮರಾಜನಗರ ತಾಲೂಕಿನಲ್ಲಿ 19.5 ಮಿ.ಮೀ, ಕೊಳ್ಳೇಗಾಲದಲ್ಲಿ 12.9 ಮಿ.ಮೀ, ಗುಂಡ್ಲುಪೇಟೆ 20.3 ಮಿ.ಮೀ, ಯಳಂದೂರಿನಲ್ಲಿ 19.5 ಮಿ.ಮೀ ಸೇರಿ ಜಿಲ್ಲೆಯಲ್ಲಿ ಸರಾಸರಿ 16.4 ಮಿ.ಮೀ ಮಳೆ ಬಿದ್ದಿದೆ.
ಭಾನುವಾರ ಬೆಳಗ್ಗೆಯಿಂದ ಬಿಸಿಲಿನ ಝಳ ಹೆಚ್ಚಾಗಿತ್ತು. ಸಂಜೆ 4 ಗಂಟೆ ವೇಳೆಗೆ ಮೋಡ ಕವಿದ ವಾತಾವರಣವಾಗಿ ಮಳೆಯಾಗುವ ಮುನ್ಸೂಚನೆ ಇತು. ಸಂಜೆ 6.30ಕ್ಕೆ ಶುರುವಾದ ಸಾಧಾರಣ ಮಳೆ ರಾತ್ರಿಯಾಗುತ್ತಿದ್ದಂತೆ ಜೋರಾಗಿ ಸುರಿಯಿತು.

ಬಾಳೆ ತೋಟ ಹಾನಿ: ಚಾಮರಾಜನಗರ ತಾಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ, ಮಳೆಗೆ ಬಾಳೆ ತೋಟಕ್ಕೆ ಹಾನಿಯಾಗಿದೆ.

ಗ್ರಾಮದ ರೈತ ಲೋಕೇಶ್ ಅವರು ಎರಡು ಎಕರೆಯಲ್ಲಿ ಬಾಳೆ ಬೆಳೆದಿದ್ದರು. ಲ ನೀಡುವ ಹಂತಕ್ಕೆ ಬೆಳೆದಿತ್ತು. ಗಾಳಿ, ಮಳೆಗೆ ಸುಮಾರು 150ಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕ್ಕುರುಳಿ ಸಾವಿರಾರು ರೂ. ನಷ್ಟ ಉಂಟಾಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಲೋಕೇಶ್ ಜಿಲ್ಲಾಡಳಿತ ಪ್ರಕೃತಿ ವಿಕೋಪದಡಿ ಸೂಕ್ತ ಪರಿಹಾರ ನೀಡಿಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net