ಸುಂಟಿಕೊಪ್ಪದಲ್ಲಿ ಧಾರಾಕಾರ ಮಳೆ

IMG_20231010_162334
ಸುಂಟಿಕೊಪ್ಪದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿರುವುದು.
Published on

ಸುಂಟಿಕೊಪ್ಪ: ಸುಂಟಿಕೊಪ್ಪ ಪಟ್ಟಣದಲ್ಲಿ ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ವಿವಿಧ ಬಡಾವಣೆಗಳಿಂದ ಹರಿದು ಬಂದ ನೀರು ಜನತಾ ಕಾಲನಿಯ ತಗ್ಗು ಪ್ರದೇಶಗಳಿಗೆ ನುಗ್ಗಿತು.

ಅತೂರು ತೋಟ, ಪಾರ್ವತಿ ಬಡಾವಣೆಗಳಿಂದ ಮಾರುಕಟ್ಟೆಗಳ ಮೂಲಕ ಕೆಸರು ಮಿಶ್ರಿತ ನೀರು ರಾಷ್ಟ್ರೀಯ ಹೆದ್ದಾರಿ ಹಾದು ಜನತಾ ಕಾಲನಿಯ ತಗ್ಗು ಪ್ರದೇಶದ ಮನೆ ಹಾಗೂ ಅಂಗಡಿ, ಮುಂಗಟ್ಟುಗಳಿಗೆ ನುಗ್ಗಿತು. ರಸ್ತೆಯಲ್ಲಿ ನೀರು ಹರಿದ ಪರಿಣಾಮ ಆಟೋ ಚಾಲಕರು, ವಾಹನಗಳು, ಶಾಲಾ ಮಕ್ಕಳು, ಸಾರ್ವಜನಿಕರು ಸಂಚರಿಸಲು ಪರದಾಡುವಂತಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net