

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 435 ಡೆಂಘೆ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಂದು ಸಾವು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10 ಸಾವಿರ ಸಮೀಪಿಸಿದ್ದು, ಈವರೆಗೂ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 4,989 ಶಂಕಿತರ ಪರೀಕ್ಷೆ ನಡೆಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು 363, ಮಂಡ್ಯ 36, ಧಾರವಾಡ 14 ಸೇರಿ 435 ಹೊಸ ಡೆಂಘೆ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 9,962ಕ್ಕೆ ಏರಿಕೆಯಾಗಿದೆ. ಎಂಟು ಮಂದಿ ಮೃತಪಟ್ಟಿದ್ದಾರೆ. ಸೋಂಕಿತರಲ್ಲಿ 334 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.