'ಕರ್ನಾಟಕ ದರ್ಶನ'ಪ್ರವಾಸಕ್ಕೆ ಚಾಲನೆ

tour
Published on

ಕುಶಾಲನಗರ:

ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ 8, 9, 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಶುಕ್ರವಾರದಿಂದ ಕರ್ನಾಟಕ ದರ್ಶನ ಪ್ರವಾಸ ಹೊರಟಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗಾಗಿ ನಾಲ್ಕು ದಿನಗಳ ಕಾಲ ಈ 'ಕರ್ನಾಟಕ ದರ್ಶನ ಪ್ರವಾಸ' ಹಮ್ಮಿಕೊಳ್ಳಲಾಗಿದೆ.

ಕುಶಾಲನಗರ ಸರ್ಕಾರಿ ಮಾದರಿ ಶಾಲಾ ಆವರಣದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಪ್ರವಾಸಕ್ಕೆ ಚಾಲನೆ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ವಿದ್ಯಾರ್ಥಿಗಳ ಅವಶ್ಯಕತೆಗೆ ಬೇಕಾಗುವ ಪ್ರವಾಸದ ಕಿಟ್ ವಿತರಣೆ ಮಾಡಿದರು. ರಾಧಾಕೃಷ್ಣ, ಟಿ.ಜಿ. ಪ್ರೇಮಕುಮಾರ್ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net