ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಪಕ್ವಾಡಾ

DSC_9626
Published on

ಗದಗ: ವಿಶ್ವ ಪ್ರವಾಸೋದ್ಯಮ ದಿನಾಚರಣೆ 2023 ರ ಅಂಗವಾಗಿ ಗದಗ ನಗರದ ವೀರನಾರಾಯಣ ದೇವಸ್ಥಾನದ ಆವರಣದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಪಕ್ವಾಡಾ ಕಾರ್ಯಕ್ರಮ ಜರುಗಿತು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸ್ವಚ್ಛತಾ ಪಕ್ವಾಡಾ ಕಾರ್ಯಕ್ರಮಕ್ಕೆ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ವೀರನಾರಾಯಣ ದೇವಸ್ಥಾನ ಮತ್ತು ತ್ರಿಕೂಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಕೆ.ಡಿ. ಗೋಡಖಿಂಡಿ, ವೀರನಾರಾಯಣ ದೇವಸ್ಥಾನ ಮತ್ತು ತ್ರಿಕೂಟೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಆನಂದ ಪೋತ್ನೀಸ್ ಸೇರಿದಂತೆ ದೇವಸ್ಥಾನ ಸಮಿತಿಯ ಸದಸ್ಯರು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ , ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ  ಪ್ರವಾಸಿ ಮಿತ್ರರು ಹಾಗೂ ನಗರಸಭೆಯ ಸ್ವಚ್ಛತಾ ಸಿಬ್ಬಂದಿ ಹಾಜರಿದ್ದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net