

ಮಡಿಕೇರಿ:
ಮಡಿಕೇರಿ ರಾಜಾಸೀಟ್‌ನಲ್ಲಿ ಮಕ್ಕಳ ಪುಟಾಣಿ ರೈಲು ಆರಂಭ ಸಂಬAಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‌ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‌ಗಳು ಮಾಹಿತಿ ಪಡೆದಿದ್ದು, ಈ ಸಂಬAಧ ವರದಿ ಬಂದ ನಂತರ ಪುಟಾಣಿ ರೈಲು ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಿಶೇಷ ಆಹ್ವಾನಿತ ಜಿ. ಚಿದ್ವಿಲಾಸ್ ರಾಜಾಸೀಟಿನಲ್ಲಿ ಮಕ್ಕಳ ರೈಲು ಸ್ಥಗಿತವಾಗಿ ಹಲವು ವರ್ಷಗಳಾಗಿದ್ದು, ಈ ಬಗ್ಗೆ ತುರ್ತು ಕ್ರಮವಹಿಸಬೇಕಿದೆ ಎಂದು ಮನವಿ ಮಾಡಿದರು. ನಗರದ ಅಜ್ಜಮಾಡ ದೇವಯ್ಯ ವೃತ್ತದ ಬಳಿ ‘ಮರ್ಕರ ಸ್ಕೆ÷್ವÃರ್’ ಆಕರ್ಷಣೀಯಗೊಳಿಸಿ ಅಭಿವೃದ್ಧಿ ಪಡಿಸುವಂತಾಗಬೇಕು. ಮಡಿಕೇರಿ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಕಿರಿದಾದ ರಸ್ತೆಗಳು ಇರುವುದರಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಬೇಕು ಎಂದು ಪ್ರಸ್ತಾವನೆ ಇದ್ದು, ಈ ಸಂಬAಧ ತುರ್ತಾಗಿ ಆದಲ್ಲಿ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸಲಹೆ ಮಾಡಿದರು. ಇದಕ್ಕಾಗಿ ಅನುದಾನ ಮೀಸಲಿದ್ದು, ಟೆಂಡರ್ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸದಸ್ಯೆ ಮೋಂತಿ ಗಣೇಶ್ ರಾಜಾಸೀಟು ಮುಖ್ಯ ದ್ವಾರದ ಬಳಿ ಅಂಗಡಿಗಳು ತುಂಬಾ ಇದ್ದು, ಪ್ರವಾಸಿಗರಿಗೆ ಕಿರಿಕಿರಿ ಉಂಟಾಗುತ್ತಿದೆ. ಈ ಸಂಬAಧ ಅಗತ್ಯ ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.
ದಸರಾ ಸಂದರ್ಭದಲ್ಲಿ ‘ಆಹಾರ ಮೇಳ’ ಆಯೋಜಿಸುವಂತಾಗಬೇಕು ಎಂದು ಜಿ.ಚಿದ್ವಿಲಾಸ್ ಅವರು ಸಲಹೆ ಮಾಡಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ದಸರಾಕ್ಕೆ ಮೊದಲೇ ಆಹಾರ ಮೇಳ ಆಯೋಜಿಸುವುದು ಒಳ್ಳೆಯದು ಎಂದರು. ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಚಿದ್ವಿಲಾಸ್ ಕೋರಿದರು. ಮಡಿಕೇರಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಡಿಸಿ ಹೇಳಿದರು.
ಜಿಲ್ಲೆಯಲ್ಲಿ ಪ್ರವಾಸಿ ಬಸ್ ಸಂಚಾರಕ್ಕೆ ಅವಕಾಶ ಮಾಡುವಂತಾಗಬೇಕು. ಇದರಿಂದ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬಹುದಾಗಿದೆ ಎಂದು ಚಿದ್ವಿಲಾಸ್ ಅವರು ಅಭಿಪ್ರಾಯ ಪಟ್ಟರು.
ದುಬಾರೆಯಲ್ಲಿ ತೂಗುಸೇತುವೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಶೀಘ್ರ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಕುಶಾಲನಗರ ಬಳಿಯ ತಾವರೆಕೆರೆ ಅಭಿವೃದ್ಧಿ ಪಡಿಸಿದ್ದಲ್ಲಿ ಇದನ್ನು ಸಹ ಪ್ರವಾಸಿ ತಾಣವನ್ನಾಗಿ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.
ಇರ್ಪು ಜಲಪಾತದಲ್ಲಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಪ್ರವಾಸಿಗರ ಅನುಕೂಲಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದರು.
ಹೋಟೆಲ್ ಅಸೋಷಿಯೇಷನ್‌ನ ದಿನೇಶ್ ಕಾರ್ಯಪ್ಪ ಮಾತನಾಡಿ ಪ್ರವಾಸಿ ಸ್ಥಳಗಳ ಬಳಿ ಸೈನ್‌ಬೋರ್ಡ್ ಅಳವಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹೋಂ ಸ್ಟೇ ಅಸೋಷಿಯೇಷನ್‌ನ ಮಾಜಿ ಅಧ್ಯಕ್ಷ ಕರುಂಬಯ್ಯ ಮಾತನಾಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳು ಸಂಚಾರ ಮಾಡುತ್ತಿದ್ದು, ಈ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸುವಂತಾಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ವಾಹನ ಪಾರ್ಕಿಂಗ್ ಸ್ಥಳವನ್ನು ಗುರುತು ಮಾಡಬೇಕು. ಹೋಟೆಲ್, ಹೋಂಸ್ಟೇ ರೆಸಾರ್ಟ್ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿ ಫುಟೇಜ್‌ನಿಂದ ಮಾಹಿತಿ ಪಡೆಯಲು ಸಾಧ್ಯವಾಗಲಿದ್ದು, ಆ ನಿಟ್ಟಿನಲ್ಲಿ ಸಾಮೂಹಿಕ ಜವಾಬ್ದಾರಿ ಅಗತ್ಯ ಎಂದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ ಮುಂದಿನ ದಿನಗಳಲ್ಲಿ ಕಾಫಿ ತಯಾರಿಸುವ ವಿಧಾನ ಕುರಿತು ತರಬೇತಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಕಾಫಿ ಮಂಡಳಿಯ ಅಧ್ಯಕ್ಷರನ್ನು ಜಿಲ್ಲೆಗೆ ಆಹ್ವಾನಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಮಾತನಾಡಿ ಜಿಲ್ಲೆಯಲ್ಲಿ ಹೋಂ ಸ್ಟೇಗಳು ಹೆಚ್ಚಿನ ಸಂಖ್ಯೆಯಲ್ಲಿದೆ. ಹೋಂಸ್ಟೇ, ಹೋಟೆಲ್ ಸೇರಿದಂತೆ ಪ್ರವಾಸೋದ್ಯಮ ಸಂಬAಧಿಸಿದAತೆ ‘ಸಕ್ಸಸ್ ಸ್ಟೋರಿ’ ಪ್ರಕಟ ಆಗುವಂತಾಗಬೇಕು. ಇದರಿಂದ ಹೋಂಸ್ಟೇ, ರೆಸಾರ್ಟ್ಗಳ ಬಗ್ಗೆ ಹೆಚ್ಚಿನ ವಿಶ್ವಾಸ ಬರಲಿದೆ. ಈ ವರ್ಷ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಯಾವುದಾದರೂ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಜಿಲ್ಲೆಯಲ್ಲಿನ ಆಸಕ್ತರು ಕೊಡಗು ಪ್ರವಾಸೋದ್ಯಮ ಅಭಿವೃದ್ಧಿ ಸಂಬAಧ ಲಿಖಿತವಾಗಿ ಮಾಹಿತಿ ನೀಡಬಹುದಾಗಿದೆ. ಪ್ರವಾಸೋದ್ಯಮ ಮಾಹಿತಿ ಒಳಗೊಂಡ ಮಾರ್ಗಸೂಚಿಯನ್ನು ತಯಾರಿಸಬೇಕು. ಇಲ್ಲಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಮಾಹಿತಿ ಇರಬೇಕು. ಕಾಫಿ ಟೇಬಲ್ ಬುಕ್‌ನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರವಾಸೋದ್ಯಮ ಚಟುವಟಿಕೆ ಬಗ್ಗೆ ಮಾಹಿತಿ ನೀಡುವುದು, ಪ್ರವಾಸಿಗರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ನಗರದ ಕೋಟೆ ಆವರಣದ ಸುತ್ತ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಂಬೆಕಲ್ಲು ನವೀನ್ ಅವರು ಮಾತನಾಡಿ ರಾಜಾಸೀಟು ಬಳಿ ಕೂರ್ಗ್ ವಿಲೇಜ್ ಆರಂಭವಾಗಿದ್ದು, ಪ್ರವಾಸಿಗರು ಸಹ ಭೇಟಿ ನೀಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಹೋಂ ಸ್ಟೇ, ರೆಸಾರ್ಟ್, ಟೂರ್ ಮತ್ತು ಟ್ರಾವೆಲ್ ಸಂಸ್ಥೆಯವರು ಇದುವರೆಗೆ ನೋಂದಣಿ ಮಾಡದಿದ್ದಲ್ಲಿ ನೋಂದಣಿ ಮಾಡಿಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹಿರಿಯ ಪತ್ರಕರ್ತ ಹೆಚ್.ಟಿ ಅನಿಲ್ ಮಾತನಾಡಿ. ಹೊರಜಿಲ್ಲೆಗಳಲ್ಲಿ ಕೊಡಗಿನ ಪ್ರವಾಸಿ ತಾಣಗಳ ಬಗ್ಗೆ ಹೆಚ್ಚು ಪ್ರಚಾರ ಆಗಬೇಕು. ಬಾನುಲಿ ಎಫ್.ಎಂ., ಮಲ್ಟಿ ಪ್ಲೆಕ್ಸ್ ಗಳಲ್ಲಿ ಕೊಡಗಿನ ಬಗ್ಗೆ ಪ್ರಚಾರ ಆದಾಗ ಪ್ರವಾಸಿಗರಿಗೂ ಕೊಡಗಿನ ಬಗ್ಗೆ ಅಗತ್ಯ ಮಾಹಿತಿ ದೊರಕುತ್ತದೆ. ರಾಜ್ಯ ಮಟ್ಟದ ಮತ್ತು ಇತರ ರಾಜ್ಯಗಳ ಪತ್ರಿಕೆಗಳಲ್ಲಿ ಕೊಡಗು ಪ್ರವಾಸದ ಬಗ್ಗೆ ಮಾಹಿತಿ ಲೇಖನ ಪ್ರಕಟ ಆಗಬೇಕು. ಈ ಮೂಲಕ ಪ್ರವಾಸಿಗರಿಗೆ ದೊಡ್ಡ ರೀತಿಯಲ್ಲಿ ಕೊಡಗಿನ ಪರಿಚಯ ಆಗಲಿದೆ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎನ್.ಎಸ್. ಪಣೀಂದ್ರ, ಪರಿಸರ ಅಧಿಕಾರಿ ರಘುರಾಮ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಕೆಆರ್‌ಐಡಿಎಲ್ ಸಂಸ್ಥೆಯ ಎಂಜಿನಿಯರ್ ಪ್ರಮೋದ್, ಕೊಡಗು ಜಿಲ್ಲಾ ಟೂರ್ ಅಂಡ್ ಟ್ರಾವೆಲ್ ಅಧ್ಯಕ್ಷ ವಸಂತ್, ಸೋಮವಾರಪೇಟೆ ತಾಲೂಲು ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷ ರೋಹಿತ್, ದುಬಾರೆ ರಿವರ್ ರ‍್ಯಾಪ್ಟಿಂಗ್ ಅಸೋಷಿಯೇಷನ್ ಅಧ್ಯಕ್ಷ ಚಂಗಪ್ಪ, ಬರಪೊಳೆ ರಿವರ್ ರ‍್ಯಾಪ್ಟಿಂಗ್ ಅಧ್ಯಕ್ಷ ಸಿ.ಎಸ್. ರತನ್, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತಿನ್ ಇತರರು ಇದ್ದರು.