ರಾಜ್ಯದಲ್ಲಿ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ

Published on

ಮಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಜ್ಯದಲ್ಲಿ ಶೀಘ್ರ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಇಲಾಖಾ ಸಚಿವರೊಂದಿಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ವತಿಯಿಂದ ಮಂಗಳೂರಿನಲ್ಲಿ ಶುಕ್ರವಾರ ದ.ಕ ಉಡುಪಿ ಜಿಲ್ಲಾ ಟ್ರಾವೆಲ್, ಟೂರಿಸಂ ಮತ್ತು ಹಾಸ್ಪಿಟಾಲಿಟಿ ಪಾಲುದಾರರ (ಸ್ಟೇಕ್‌ಹೋಲ್ಡರ್ಸ್‌)ರೊಂದಿಗೆ ಸಂವಾದ ಕಾರ್ಯಕ್ರಮ ಕನೆಕ್ಟ್‌-2021ರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆಗಸ್ಟ್ 27-29ರವ ರೆಗೆ ಕರ್ನಾಟಕ ಇಂಟರ್‌ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ (ಕೈಟ್) ಆಯೋಜಿಸಲಾಗಿದೆ. ಆ ಬಳಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು. ಕರ್ನಾಟಕ ಪ್ರವಾಸೋದ್ಯಮ ನೀತಿ 2020-2025ರಲ್ಲಿ 5 ಸಾವಿರ ಕೋಟಿ ಹೂಡಿಕೆ ಮತ್ತು 10 ಲಕ್ಷ ಮಂದಿಗೆ ಉದ್ಯೋಗ ನಿರೀಕ್ಷಿಸಲಾಗಿದೆ ಎಂದವರು ವಿವರಿಸಿದರು.
ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕುಮಾರ್ ಪುಷ್ಕರ, ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಜಂಟಿ ಕಾರ್ಯದರ್ಶಿ ರವೀಂದ್ರ, ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net