

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ವರ್ಷದ ಕಾರ್ಯಯೋಜನೆ ರೂಪಿಸಲು ಸೆ.27ರಂದು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ತಪಸ್ಯಾ ಪೌಂಡೇಶನ್ ವತಿಯಿಂದ ೆಬ್ರವರಿಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಮಂಗಳೂರು ಬೀಚ್ ೆಸ್ಟಿವಲ್ ಹಾಗೂ ಮಂಗಳೂರು ಟ್ರೈಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಬುಧವಾರ ಹಮ್ಮಿಕೊಂಡ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮದ ಅಭಿವೃದ್ಧಿಯ ಆಶಯದಂತೆ ಜಿಲ್ಲೆಯಲ್ಲಿ 1 ವರ್ಷದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮ ಹಾಗೂ ಯೋಜನೆ ಬಗ್ಗೆ ಕಾರ್ಯಾಗಾರದಲ್ಲಿ ರೂಪುರೇಷೆ ಸಿದ್ದಪಡಿಸಲಾಗುವುದು. ಸರ್ಫಿಂಗ್, ಟ್ರೈಯತ್ಲಾನ್ ಸಹಿತ ವಿವಿಧ ಕಾರ್ಯಕ್ರಮಗಳನ್ನು ನಿಗದಿತ ದಿನಾಂಕದಂದು ಪ್ರತೀ ವರ್ಷ ಆಯೋಜಿಸುವ ನಿಟ್ಟಿನಲ್ಲಿ ತೀರ್ಮಾನ ಮಾಡಲಾಗುವುದು ಎಂದರು.
ಟ್ರೈಯತ್ಲಾನ್ ಮೂಲಕ ಪ್ರವಾಸೋದ್ಯಮ ಅಭಿವೃದ್ದಿಯಾಗುವ ಜತೆಗೆ ತಪಸ್ಯ ೌಂಡೇಶನ್ ವತಿಯಿಂದ ಮುಡಿಪುವಿನಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ರೋಗಿಗಳ ಆರೈಕೆ ಕೇಂದ್ರವೂ ಆರೋಗ್ಯ ಕ್ಷೇತ್ರದ ಮಹತ್ವದ ಕಾರ್ಯ ಎಂದರು.
ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಾತನಾಡಿ, ಕ್ಯಾನ್ಸರ್‌ಪೀಡಿತರಿಗೆ ನೆಮ್ಮದಿಯ ಆರೋಗ್ಯವನ್ನು ಕರುಣಿಸುವ ನಿಟ್ಟಿನಲ್ಲಿ ತಪಸ್ಯ ಸಂಸ್ಥೆಯಿಂದ ಮುಡಿಪುವಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಆರೋಗ್ಯ ಕೇಂದ್ರದ ಭಾಗವಾಗಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟ್ರೈಯತ್ಲಾನ್ ಹಮ್ಮಿಕೊಂಡಿರುವುದು ಮಾದರಿ ಕಾರ್ಯ. ಈ ಮೂಲಕ ಮಂಗಳೂರಿನ ಹೆಸರು ಧನಾತ್ಮಕವಾಗಿ ಜಾಗತಿಕವಾಗಿ ಕಂಗೊಳಿಸಲಿದೆ ಎಂದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂ.ಸಿಇಒ ಡಾ.ಆನಂದ್ ಕೆ., ಮನಪಾ ಆಯುಕ್ತ ಆನಂದ್ ಸಿ.ಎಲ್., ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಶ್ಯಂತ್, ಪ್ರಮುಖರಾದ ಡಾ.ಮೆಲ್ವಿನ್ ಡಿಸೋಜ, ಎನ್.ಬಿ.ಶೆಟ್ಟಿ, ಶಬಿತಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಡಾ.ನವೀನ್‌ಚಂದ್ರ ಹೆಗ್ಡೆ ಪ್ರಸ್ತಾವಿಸಿದರು. ಡಾ.ಆಶಾಜ್ಯೋತಿ ರೈ ಸ್ವಾಗತಿಸಿದರು.