

ತರೀಕೆರೆ: ರಾಜ್ಯಸರ್ಕಾರ ಗ್ರಾಪಂನಿಂದ ಮೇಲ್ದರ್ಜೆಗೇರಿದ ಪಟ್ಟಣ ಪಂಚಾಯಿತಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಜನಪರ ಕಾರ್ಯಕ್ರಮ ರೂಪಿಸುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಅಜ್ಜಂಪುರ ಪಟ್ಟಣದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಲಾನುಭವಿಗಳಿಗೆ 2024-25ನೇ ಸಾಲಿನ ಎಸ್‌ಎ್ಸಿ ಯೋಜನೆಯಡಿ ಶೇ.24ರ ಸಹಾಯಧನ ವಿತರಿಸಿ ಮಾತನಾಡಿ, ಅಜ್ಜಂಪುರ ತಾಲೂಕು ಕೇಂದ್ರವಾಗಿ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿದ ಮೊದಲ ವರ್ಷದಲ್ಲೇ ಎಸ್ಸಿ,ಎಸ್ಟಿ ಲಾನುಭವಿಗಳಿಗೆ ವಿವಿಧ ಸೌಲಭ್ಯ ಒದಗಿಸಿದೆ. ಪಟ್ಟಣದಲ್ಲಿ ದಿನ ಕಳೆದಂತೆ ಕುಟುಂಬಗಳು ಬೆಳೆಯುತ್ತಿದ್ದು, ಸೂಕ್ತ ಜಾಗ ಖರೀದಿಸಿ ಅರ್ಹರಿಗೆ ನಿವೇಶನ ಹಂಚುವ ವ್ಯವಸ್ಥೆ ಮಾಡಲಾಗುವುದು ಎಂದರು.
ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ, ಡಿಜಿಟಲ್ ಬಸ್‌ನಿಲ್ದಾಣ ನಿರ್ಮಾಣ, ಸರ್ಕಾರಿ ಆಸ್ಪತ್ರೆವರೆಗಿನ ರಸ್ತೆ ಮತ್ತು ಪುಟ್‌ಪಾತ್ ಅಭಿವೃದ್ಧಿಗೆ 88 ಲಕ್ಷ ರೂ.ಒದಗಿಸಲಾಗಿದ್ದು, ಸದ್ಯದಲ್ಲಿಯೇ ಇಂದಿರಾ ಕ್ಯಾಂಟಿನ್, ಡಿಜಿಟಲ್ ಗ್ರಂಥಾಲಯವನ್ನು ಸದ್ಯದಲ್ಲಿಯೇ ಉದ್ಘಾಟಿಸಲಾಗುವುದು ಎಂದರು.
ಪಟ್ಟಣದ ವಿವಿಧ ಬಡಾವಣೆಯ ರಸ್ತೆ, ಚರಂಡಿ ನಿರ್ಮಾಣದ ಜತೆಗೆ ಆಯಕಟ್ಟಿನ ಜಾಗದಲ್ಲಿ ುಡ್‌ಕೋರ್ಟ್ ಸ್ಥಾಪನೆಗೆ 2 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.
ಅರ್ಹ ಎಸ್ಸಿ ಎಸ್ಟಿ ಲಾನುಭವಿಗಳಿಗೆ ಸಿಲಿಂಡರ್, ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, 22 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಕೆಪಿಸಿಸಿ ಸದಸ್ಯ ಜಿ.ನಟರಾಜ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಯಾನಂದ್, ಬಗರ್‌ಹುಕುಂ ಸಮಿತಿ ಸದಸ್ಯ ಪ್ರಕಾಶ್, ಪಪಂ ಮಾಜಿ ಸದಸ್ಯರಾದ ಬಿ.ಕೆ.ರಾಘವೇಂದ್ರ, ನವೀನ್, ಕೆಡಿಪಿ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯರಾದ ಮಹೇಂದ್ರಾಚಾರ್, ಅಣ್ಣಪ್ಪ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ಮುಖ್ಯಾಧಿಕಾರಿ ಟಿ.ಜಿ.ರಮೇಶ್ ಮತ್ತಿತರರಿದ್ದರು.