ಕಾಲುವೆಗೆ ಬಿದ್ದ ಟ್ರ್ಯಾಕ್ಟರ್ ಪಲ್ಟಿ; ಜಮೀನಿಗೆ ಹೊರಟ ಚಾಲಕ ಸ್ಥಳದಲ್ಲೇ ಸಾವು...

Tractor
Published on

ಗದಗ: ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ಕಾಲುವೆಗೆ ಬಿದ್ದ ಪರಿಣಾಮವಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

ಬೆನಕನಕೊಪ್ಪ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಚಿಕ್ಕನರಗುಂದ ಗ್ರಾಮದ ಶಿವಾನಂದ ಪಂಚಪ್ಪ ತಳವಾರ (22) ಸಾವಿಗೀಡಾಗಿದ್ದಾನೆ.

ಚಿಕ್ಕನರಗುಂದ ಗ್ರಾಮದಿಂದ ಜಮೀನು ಕೆಲಸಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಕಾಲುವೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಶಿವಾನಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net