ಹಲಕರ್ಟಿ ಬಳಿ ಟ್ರಾಕ್ಟರ್ ಬೈಕ್ ಡಿಕ್ಕಿ : ಮೂವರು ಸವಾರರ ಸಾವು

Wadi Crime
Tractor-Baik Accident : Three Youths Killed
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ
ರಾಷ್ಟಿಯ ಹೆದ್ದಾರಿ ೧೫೦ರಲ್ಲಿರುವÀ ಇಲ್ಲಿಗೆ ಸಮೀಪದ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನ ಹಾಗೂ ಟ್ರಾö್ಯಕ್ಟರ್ ಡಿಕ್ಕಿ ಹೊಡೆದು ಅರ್ಜುನ ಪಾಂಡು ರಾಠೋಡ (೨೨) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗುರುಜಿನಾಯಕ ತಾಂಡಾ ನಿವಾಸಿ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ರೋಹಿತ ಮೋಹನ ಚವ್ಹಾಣ (೧೮) ಮತ್ತು ಕೃಷ್ಣಾ ಯಂಕಪ್ಪ (೨೧) ಗಂಭೀರ ಗಾಯಗೊಂಡಿದ್ದರು. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಶಂಕರಗೌಡ ಪಾಟೀಲ್,ಪಿಎಸ್‌ಐ ತಿರುಮಲೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿಯೇ ಮೃತಪಟ್ಟಿರುವ ಅರ್ಜುನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net