

ನ್ಯಾಮತಿ: ಪಟ್ಟಣದ ಹೊರವಲಯದ ಕುಮಟಾ- ಕಾರಮಡಗಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿದ್ದಾನೆ.
ತಾಲೂಕಿನ ಗೋವಿನಕೊವಿ ಗ್ರಾಮದ ಬಸವರಾಜಪ್ಪ (75) ಮೃತ ದುರ್ದೈವಿ. ಮಗಳ ಮನೆ ಸುರಹೊನ್ನೆಗೆ ಬಂದಿದ್ದ ಅವರು ಸೋಮವಾರ ಮಧ್ಯಾಹ್ನ ಮನೆಯಿಂದ ಜಮೀನಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿದ ನ್ಯಾಮತಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮೃತರ ಕುಟುಂಬಸ್ಥರು ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.