

ಬದಿಯಡ್ಕ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಬದಿಯಡ್ಕ ಘಟಕ ವತಿಯಿಂದ ಶುಕ್ರವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಯಿತು.
ವ್ಯಾಪಾರ ಭವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಯಿತು. ಘಟಕ ಉಪಾಧ್ಯಕ್ಷ ಹಮೀದ್ ಬರಕಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಉದ್ಘಾಟಿಸಿದರು. ಘಟಕ ಕೋಶಾಧಿಕಾರಿ ಜ್ಞಾನದೇವ ಶೆಣೈ, ವನಿತಾವಿಂಗ್ ಪ್ರಧಾನ ಕಾರ್ಯದರ್ಶಿ ಕೃಪಾ ಯತೀಶ್, ಯೂತ್‌ವಿಂಗ್ ಪ್ರಧಾನ ಕಾರ್ಯದರ್ಶಿ ಶಾಹಿದ್ ಮಾತನಾಡಿದರು.
ಘಟಕ ಪ್ರಧಾನ ಕಾರ್ಯದರ್ಶಿ ರವಿ ನವಶಕ್ತಿ ಸ್ವಾಗತಿಸಿ, ಕಾರ್ಯದರ್ಶಿ ಉದಯಶಂಕರ ವಂದಿಸಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ನೀಡಲಾಯಿತು.