ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತವಾಗಬೇಡಿ: ಪ್ರಾಂಶುಪಾಲ ಡಾ.ಜೆ.ಮಹದೇವ ಹೇಳಿಕೆ

1 (3)
Published on

ಮಂಡ್ಯ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿರಬಾರದು ಎಂದು ಪಿಇಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಜೆ.ಮಹದೇವ ಹೇಳಿದರು.

ನಗರದ ಪಿಇಎಸ್ ಕಾಲೇಜಿನ ಆವರಣದಲ್ಲಿ ಜನತಾ ಶಿಕ್ಷಣ ಟ್ರಸ್ಟ್ ಹಾಗೂ ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಪಾರಂಪರಿಕ ದಿನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ಮತ್ತು ಕ್ರೀಡೆ ಶಿಕ್ಷಣದ ಮುಖ್ಯ ಅಂಗವಾಗಿದೆ. ಆದ್ದರಿಂದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾಂಸ್ಕೃತಿಕ ಸಂಚಾಲಕ ಡಾ.ಜಿ.ವಿ.ನರಸಿಂಹನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯುವುದಕ್ಕೆ ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿಯೂ ಸಾಧಕರಾಗಿ ಹೊರ ಹೊಮ್ಮಿದ್ದಾರೆ ಎಂದರು.

ಜನತಾ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಆರ್.ದಯಾನಂದ, ಕ್ರೀಡಾ ಸಮಿತಿ ಸಂಚಾಲಕ ಮಹೇಶ್‌ಕುಮಾರ್, ಸಹಪ್ರಾಧ್ಯಾಪಕ ವೀರೇಶ್ ಕೀಲಾರ ಇತರರಿದ್ದರು. ವಾರ್ಷಿಕ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಉತ್ತಮ ಕ್ರೀಡಾಪಟುಗಳನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net