ಉಕ್ಕಿದ ಗಂಗಾವಳಿ ನದಿ, ಫಣಸಗುಳಿ ಸೇತುವೆ ಮೇಲೆ ಸಂಚಾರ ನಿಷೇಧ!

04 ylp 01 (board)
Published on

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾ.ಪಂ. ವ್ಯಾಪ್ತಿಯ ಅರಬೈಲ್ ಸಮೀಪದ ಫಣಸಗುಳಿ ಸೇತುವೆ ಮೇಲೆ ಸಂಚಾರ ನಿಷೇಧಿಸಲಾಗಿದೆ.

ಗಂಗಾವಳಿ ನದಿ ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದ್ದರೂ ಅಪಾಯ ಲೆಕ್ಕಿಸದೇ ಸೇತುವೆ ಮೇಲೆ ವಾಹನಗಳ ಓಡಾಟ ಮುಂದುವರಿದಿತ್ತು. ಈ ಕುರಿತು ‘ವಿಜಯವಾಣಿ’ ಜುಲೈ 3 ರಂದು ವರದಿ ಪ್ರಕಟಿಸಿತ್ತು.

ವರದಿಗೆ ಸ್ಪಂದಿಸಿದ ಸ್ಥಳೀಯ ಗ್ರಾಮ ಪಂಚಾಯಿತಿ, ಸೇತುವೆ ಮೇಲೆ ಸಂಚಾರ ನಿರ್ಬಂಧಿಸಿದೆ. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೆನ್ನವೀರ ಕುಂಬಾರ ನೇತೃತ್ವದಲ್ಲಿ ಸೇತುವೆ ಬಳಿ ಎಚ್ಚರಿಕೆಯ ಫಲಕ ಅಳವಡಿಸಲಾಗಿದ್ದು, ಸ್ಥಳೀಯರಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಯಿತು. ಗ್ರಾ.ಪಂ. ಸದಸ್ಯ ವಿಶ್ವೇಶ್ವರ ಹೆಗಡೆ, ಸ್ಥಳೀಯರಾದ ವಿದ್ಯಾಧರ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net